ಗಂಡ: ಬಾರೇ, ಬೆಳಿಗ್ಗೆ ಯೋಗಾ ಮಾಡಿದ್ರೆ ಒಳ್ಳೆಯದು.
ಹೆಂಡತಿ: ನೀವು ಹೇಳೋದು ಏನೂಂತಾ? ನಾನು ದಪ್ಪ ಅಂತಾನ?
ಗಂ: ಇಲ್ಲ. ಯೋಗಾ ಆರೋಗ್ಯಕ್ಕೆ ಒಳ್ಳೆಯದು ಅಂತ.
ಹೆಂ: ಅಂದ್ರೆ ನನ್ನ ಆರೋಗ್ಯ ಸರಿ ಇಲ್ಲ ಅಂತಾನ?
ಗಂ: ಹೋಗ್ಲಿ ಬಿಡು. ಏಳಬೇಡ.
ಹೆಂ: ಅಂದರೆ ನಾನು ಸೋಮಾರಿ ಅಂತ...
ಗಂ: ಹಾಗಲ್ಲ. ನಿನಗೆ ನಾನು ಹೇಳಿದ್ದು ಅರ್ಥ ಆಗಿಲ್ಲ.
ಹೆಂ: ಅಂದ್ರೆ ನಾನು ನಿಮ್ಮನ್ನ ಅರ್ಥ ಮಾಡಿಕೊಂಡಿಲ್ಲ ಅಂತ ನಿಮ್ಮರ್ಥ..
ಗಂ: ನಾನು ಹಾಗೆ ಹೇಳಲಿಲ್ಲ
ಹೆಂ: ಅಂದರೆ ನಾನು ಸುಳ್ಳು ಹೇಳ್ತೀನಿ ಅಂತ...
ಗಂ: ಎ.. ಸುಮ್ಮನೆ ಬೆಳಿಗ್ಗೆ ಬೆಳಿಗ್ಗೆ ತಲೆ ತಿನ್ನಬೇಡ.
.
ಹೆಂ: ಅಂದ್ರೆ ನಾನು ಜಗಳಗಂಟಿ ಅಂತ...
ಗಂ: ಹೋಗ್ಲಿ ಬಿಡು.. ನಾನೂ ಯೋಗಕ್ಕೆ ಹೋಗದಿರೋದೇ ಒಳ್ಳೆದು..
ಹೆಂ: ನೋಡಿ ಅದೇ ನಾನು ಹೇಳಿದ್ದು. ನಿಮಗೂ ಹೋಗಕ್ಕೆ ಮನಸ್ಸಿರಲಿಲ್ಲ.. ಸುಮ್ಮನೆ ನನ್ನ ತಲೆ ಮೇಲೆ ಗೂಬೆ ಕೂರ್ಸೋದು..
ಗಂ: ಸರಿ ಮಹಾತಾಯಿ.. ನೀನು ನಿದ್ದೆ ಮಾಡು.. ನಾನು ಒಬ್ನೇ ಹೋಗ್ತೀನಿ.. ಸರೀನಾ?
ಹೆಂ: ಅದೇ... ನಿಮಗೆ ಎಲ್ಲ ಕಡೆಗೂ ಒಬ್ರೇ ಹೋಗಕ್ಕೆ ಇಷ್ಟ.
ಗಂ: ಅಯ್ಯೋ ಮಹಾತಾಯಿ.. ನಿಲ್ಸು.. ನನ್ನ ತಲೆ ಸುತ್ತುತ್ತಾ ಇದೆ...
ಹೆಂ: ಅದೇ ನೋಡಿ.. ನಿಮಗೆ ಯಾವಾಗ್ಲೂ ನಿಮ್ಮ ಆರೋಗ್ಯದ ಬಗ್ಗೆಯೇ ಯೋಚನೆ. ನನ್ನ ಬಗ್ಗೆ ಚೂರೂ ಚಿಂತೆಯಿಲ್ಲ ನಿಮಗೆ
karunada geleya
dsfdsf
ಗಂಡ ಹೆಂಡತಿಯನ್ನು ಬೆಳಿಗ್ಗೆ ಎಬ್ಬಿಸುತ್ತಾನೆ.!
Subscribe to:
Posts (Atom)
No comments:
Post a Comment